ಕಾರವಾರ: ಶಿರೂರು ಗುಡ್ಡ ಕುಸಿತ ದುರಂತಕ್ಕೆ ಕಾರಣರಾದವರಿಗೆ ಶಿಕ್ಷೆ ವಿಧಿಸುವ ಜೊತೆ ಸಂತ್ರಸ್ತರಿಗೆ ಯೋಗ್ಯ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಈಡಿಗ ಮಹಾಮಂಡಳಿಯ ಅಧ್ಯಕ್ಷ ಪ್ರಣವಾನಂದ ಸ್ವಾಮೀಜಿ ಬುಧವಾರ ಉಪವಾಸ ಸತ್ಯಾಗ್ರಹ ನಡೆಸಲು ಸಿದ್ಧತೆ ನಡೆಸಿದ್ದು, ಇದಕ್ಕೆ ಅವರಿಗೆ ಅನುಮತಿ ಸಿಕ್ಕಿಲ್ಲ. ಈ ಹಿನ್ನಲೆ ಸಾಂಕೇತಿಕ ಧರಣಿ ನಡೆಸಿದ ಅವರು ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದರು.
ಶಿರೂರು ಗುಡ್ಡಕುಸಿತದಲ್ಲಿ ನಾಪತ್ತೆಯಾಗಿರುವ ಮೂವರ ಕುಟುಂಬಕ್ಕೆ ಸರ್ಕಾರ ಸೂಕ್ತ ಪರಿಹಾರ ನೀಡಬೇಕು. ಶೋಧ ಕಾರ್ಯಚರಣೆ ಆರಂಭಿಸಬೇಕು’ ಎಂದವರು ಒತ್ತಾಯಿಸಿದರು. ಈ ವೇಳೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ಘೋಷಣೆ ಕೂಗಿದರು. `ಕಾಣೆಯಾದವರನ್ನು ಕೂಡಲೇ ಆಧುನಿಕ ಯಂತ್ರದ ಸಹಾಯದಿಂದ ಮೃತ ದೇಹ ಹುಡುಕುವುದಕ್ಕೆ ಪ್ರಾಮಾಣಿಕ ಪ್ರಯತ್ನಕ್ಕೆ ಮಾಡಬೇಕು’ ಎಂದು ಮನವಿ ಸಲ್ಲಿಸಿದರು.ಉಳುವರೆ ಗ್ರಾಮದಲ್ಲಿ ಇರುವ ಸುಮಾರು 30 ಮನೆಗಳು ಸಂಪೂರ್ಣವಾಗಿ ನಾಶವಾಗಿದ್ದು, ಎಲ್ಲರಿಗೂ ಮನೆಗಳನ್ನು ಕಟ್ಟಿಸಿ ಆರ್ಥಿಕ ನೆರವನ್ನು ನೀಡಬೇಕು. ಮರಣಕ್ಕೆ ಕಾರಣವಾದವರ ಮೇಲೆ ತಕ್ಷಣ ಕ್ರಮವಾಗಬೇಕು’ ಎಂದು ಆಗ್ರಹಿಸಿದರು.
ಕುಂದಾಪುರದಿAದ ಗೋವಾವರೆಗ ರಸ್ತೆ ಮಾರ್ಗದಲ್ಲಿ ಇನ್ನು ಸಾಕಷ್ಟು ಕಡೆ ಗುಡ್ಡ ಕುಸಿದು ಬೀಳುವ ಸಾಧ್ಯತೆ ಇದ್ದು ಮುನ್ನೆಚ್ಚರಿಕೆ ಅಗತ್ಯ ಎಂದರು. ಜಿಲ್ಲಾ ಹಾಲಕ್ಕಿ ಸಂಘದ ಜಿಲ್ಲಾಧ್ಯಕ್ಷ ಹನುಮಂತ ಗೌಡ, ಕೇರಳದ ಅರ್ಜುನ್ ಸಂಬoಧಿ ರಾಜನ್ ದುರಂತದಲ್ಲಿ ಸಾವನ್ನಪ್ಪಿದವರ ಕುಟುಂಬದವರು ಪ್ರತಿಭಟನೆಯಲ್ಲಿದ್ದರು.