ಭಟ್ಕಳ : ಉತ್ತರ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು, ಪತ್ರಕರ್ತರೂ ಆದ ಬಿಎನ್ ವಾಸರೆ ಹಾಗೂ ಇತರೆ ಪತ್ರಕರ್ತರ ಮೇಲೆ ಮೊನ್ನೆ ದಾಂಡೇಲಿಯ ಅಬ್ದುಲ್ ಕಲಾಂ ವಸತಿ ಶಾಲೆಯ ಪ್ರಾಂಶುಪಾಲರ ವಿರುದ್ಧದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಅಲ್ಲಿನ ಸಿಪಿಐ ಭೀಮಣ್ಣ ಸೂರಿ ಅವರು ಮಾಡಿದ ದರ್ಪ, ಅನುಚಿತ ನಡೆ ಖಂಡನೀಯವಾಗಿದೆ. ಇದನ್ನು ಭಟ್ಕಳ ತಾಲೂಕು ಸಾಹಿತ್ಯ ಪರಿಷತ್ ಘಟಕವು ತೀವ್ರವಾಗಿ ಖಂಡಿಸುತ್ತದೆ.
ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ,ಪತ್ರಕರ್ತರಿಗೆ ರಕ್ಷಣೆ ನೀಡಬೇಕಾದ ಪೋಲೀಸ್ ಅಧಿಕಾರಿಗಳು ಈ ರೀತಿಯಲ್ಲಿ ಸಂಯಮ ಕಳೆದುಕೊಂಡಿದ್ದಲ್ಲದೆ ವಿದ್ಯಾರ್ಥಿಗಳನ್ನು ಅವಾಚ್ಯ ಪದಗಳಿಂದ ನಿಂದಿಸಿದ ಪ್ರಾಂಶುಪಾಲರ ಪರವಾಗಿ ನಿಂತಿರುವುದನ್ನು ಮಾಧ್ಯಮದ ಮೂಲಕ ಗಮನಿಸಲಾಗಿದೆ.ಇದು ದುರದೃಷ್ಟಕರ ಸಂಗತಿಯಾಗಿದೆ. ತಪ್ಪಿತಸ್ಥರ ವಿರುದ್ದ ಸೂಕ್ತ ವಿಚಾರಣೆ ನಡೆಸಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ ಆಗ್ರಹಿಸಿದ್ದಾರೆ.