ಕಾರವಾರ-ಕಾರವಾರ ತಾಲೂಕ ಪಂಚಾಯತ್ ಕಾರ್ಯಾಲಯದಲ್ಲಿ ಸೋಮವಾರ ತಾಲೂಕ ಮಟ್ಟದ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ ಕಚೇರಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಉದ್ಘಾಟಿಸಿದರು. ನಂತರ ತಾಲೂಕ ಸಮಿತಿ ಅಧ್ಯಕ್ಷರಾದ ರಾಜೇಂದ್ರ ಹಾಡು ರಾಣಿಯವರಿಗೆ ಹಾಗೂ ಸಮಿತಿಯ ಪದಾಧಿಕಾರಿಗಳಿಗೆ ಶುಭ ಹಾರೈಸಿದರು.
ನಂತರ ಮಾತನಾಡಿದ ಸಚಿವ ಮಾಂಕಳ ವೈದ್ಯ ರಾಜ್ಯದಲ್ಲಿ ಯಾವೊಬ್ಬ ಪ್ರಜೆನು ಈ ಗ್ಯಾರಂಟಿ ಯೋಜನೆಯಿಂದ ವಂಚಿತರಾಗ ಬಾರದು ಎನ್ನುವ ಉದ್ದೇಶದಿಂದ ಈ ಸಮಿತಿಯನ್ನು ರಾಜ್ಯ,ಜಿಲ್ಲೆ ಹಾಗೂ ತಾಲೂಕ ಮಟ್ಟದಲ್ಲಿ ಜಾರಿಗೆ ತರಲಾಗಿದ್ದು ಪಂಚ ಯೋಜನೆಯಿಂದ ವಂಚಿತರಾದವರ ಮಾಹಿತಿ ಪಡೆದು ನೇರವಾಗಿ ಅವರನ್ನು ಭೇಟಿಯಾಗಿ ಈ ಯೋಜನೆ ತಲುಪಿಸುವ ಉದ್ದೇಶ ನಮ್ಮ ಸರಕಾರದ್ದಾಗಿದೆ ಎಂದರು.
ಈ ಸಂದರ್ಭದಲ್ಲಿ ಕಾರವಾರ ಶಾಸಕರಾದ ಸತೀಶ್ ಶೈಲ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಸತೀಶ್ ನಾಯ್ಕ,ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಸಾಯಿಗಾಂವಕರ್ ,ತಾಲೂಕ ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ಮುಂತಾದವರು ಈ ಸಭೆಯಲ್ಲಿ ಉಪಸ್ಥಿತರಿದ್ದರು.