ಶಿರಸಿ:ಅರಣ್ಯವಾಸಿಗಳ ಪರ ರಾಜ್ಯ ಸರ್ಕಾರ ಈ ಹಿಂದೆ ಪ್ರಕಟಿಸಿದ ನಿಲುವುನೊಂದಿಗೆ ಅರಣ್ಯವಾಸಿಗಳ ಪರವಾಗಿ ಸುಪ್ರೀಂ ಕೋರ್ಟನಲ್ಲಿ ತಿದ್ದುಪಡಿ ಪ್ರಮಾಣ ಪತ್ರವನ್ನ ಸಲ್ಲಿಸಬೇಕೆಂದು ರಾಜ್ಯ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ರಾಜ್ಯ ಸರ್ಕಾರದ ಕಾನೂನು ಸಚಿವರಾದ ಎಚ್.ಕೆ. ಪಾಟೀಲ್ ಅವರಿಗೆ ಚರ್ಚಿಸಿ ಮನವಿ ನೀಡಿದರು.
ಅವರು ಇಂದು ಕಾನೂನು ಸಚಿವ ಎಚ್.ಕೆ. ಪಾಟೀಲ್ ಅವರನ್ನು ಬೆಂಗಳೂರಿನ ಗೃಹ ಕಛೇರಿಯಲ್ಲಿ ಭೇಟಿಯಾಗಿ ಮೇಲಿನಂತೆ ಮನವಿ ನೀಡಿದರು.
ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ತೀರಸ್ಕಾರವಾಗಿರುವ ಅರ್ಜಿದಾರರನ್ನು ಅರಣ್ಯ ಪ್ರದೇಶದಿಂದ ಒಕ್ಕಲೆಬ್ಬಿಸಿ, ಅತಿಕ್ರಮಣ ಪ್ರದೇಶವನ್ನು ಅರಣ್ಯೀಕರಣ ಮಾಡಬೇಕೆಂದು
ಏAಟು ಪರಿಸರವಾದಿ ಸಂಘಟನೆಗಳು ಸುಫ್ರೀಂ ಕೋರ್ಟನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ ಹಿನ್ನೆಲೆಯಲ್ಲಿ ಅರಣ್ಯವಾಸಿಗಳ ಭೂಮಿ ಹಕ್ಕಿಗೆ ಸಂಬAಧಿಸಿ ಮಹತ್ವದ ವಿಚಾರಣೆ ನಡೆಯುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಮಧ್ಯ ಪ್ರವೇಶಿಸಿ ತಿದ್ದುಪಡಿ ಪ್ರಮಾಣ ಪತ್ರ ಸಲ್ಲಿಸಲು ಅವರು ಮನವಿಯಲ್ಲಿ ಆಗ್ರಹಿಸಿದರು.
ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಪ್ರಧಾನ ಸಂಚಾಲರಾದ ಜೆ.ಎಮ್.ಶೆಟ್ಟಿ ಅಚವೆ ಅವರು ಭಾಗವಹಿಸಿದ್ದರು.
೩ ಎಕರೆಗೆ ಭದ್ರತೆ ನಿಲುವು:
೨೭-೦೪-೧೯೭೮ ರ ನಂತರ ೩ ಎಕರೆವರೆಗೆ (ಒತ್ತುವರಿ ಭೂಮಿ ಮತ್ತು ಆತನ ಭೂಮಿ ಸೇರಿ) ಅರಣ್ಯ ಒತ್ತುವರಿ ಮಾಡಿರುವಂತಹ ಒತ್ತುವರಿದಾರರಿಗೆ ಪುನರ್ವಸತಿ ಮತ್ತು ಪುನರ್ರ ವ್ಯವಸ್ಥೆ ಪ್ಯಾಕೇಜ್ ಕಲ್ಪಿಸುವ ಬಗ್ಗೆ ಸರ್ಕಾರದ ಹಂತದಲ್ಲಿ ಪರಿಶೀಲಿಸುದನ್ನ ಹಾಗೂ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಆಗಿರುವ ಅರಣ್ಯ ಒತ್ತುವರಿಗಳಲ್ಲಿ, ಒತ್ತುವರಿ ಭೂಮಿ ಮತ್ತು ಆತನ ಪಟ್ಟಾ ಭೂಮಿ ಸೇರಿ ೩.೦೦ ಎಕರೆಗಿಂತ ಕಡಿಮೆ ಇರುವ ಒತ್ತುವರಿದಾರರನ್ನು ಒಕ್ಕಲೇಬ್ಬಿಸಬಾರದೆಂಬ ರಾಜ್ಯ ಸರ್ಕಾರವು ಮಾರ್ಚ ೧೩,೨೦೧೫ ರಂದು ಹೋರಡಿಸಿದ ಅಂಶಕ್ಕೆ ಸಂಬAಧಿಸಿದAತೆ, ಇಗಾಗಲೇ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಈ ಕುರಿತು ಸರ್ಕಾರದ ನಿಲುವನ್ನು ಸಾರ್ವತ್ರಿಕವಾಗಿ ಪ್ರಕಟಿಸಿದ್ದಾರೆ. ಈ ಅಂಶವನ್ನು ಒಳಗೊಂಡು ಸರ್ಕಾರವು ತಿದ್ದುಪಡಿ ಪ್ರಮಾಣ ಪತ್ರದಲ್ಲಿ ಉಲ್ಲೆಖೀಸಬೇಕೆಂದು ಅಧ್ಯಕ್ಷ ರವೀಂದ್ರ ನಾಯ್ಕ ಮನವಿಯಲ್ಲಿ ಆಗ್ರಹಿಸಿದ್ದಾರೆ.