ಭಟ್ಕಳ-ದಕ್ಷ ಆಡಳಿತಗಾರ, ಸಮರ್ಥ ನಾಯಕತ್ವ, ಸ್ಪಂದನಶೀಲ ಪ್ರಧಾನಿಯಾಗಿ ಜಗತ್ತೇ ಮೆಚ್ಚಿದ ವಿಶ್ವನಾಯಕನಾಗಿ, ದಣಿವರಿಯದೆ ದೇಶದ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ನೆಚ್ಚಿನ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ಬಿಜೆಪಿ ಭಟ್ಕಳಮಂಡಲದ ವತಿಯಿಂದ ಸೋಮವಾರ ಶ್ರೀ ಚನ್ನಪಟ್ಟಣ ಹನುಮಂತ ದೇವಸ್ಥಾನದಲ್ಲಿ ಶ್ರೀ ದೇವರಿಗೆ ಪೂಜೆಯನ್ನು ಸಲ್ಲಿಸಿ, ದೇಶದ ಅಭಿವೃದ್ಧಿಯ ಹರಿಕಾರ ಮೋದಿಜಿಯವರ ಉನ್ನತಿಗಾಗಿ, ಆಯುರಾರೋಗ್ಯ, ಶ್ರೇಯೋಭಿವೃದ್ಧಿಗಾಗಿ ಪ್ರಾರ್ಥನೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷರಾದ ಶ್ರೀ ಲಕ್ಷ್ಮೀನಾರಾಯಣ ನಾಯ್ಕ, ಹಿಂದುಳಿದ ಮೋರ್ಚಾ ರಾಜ್ಯ ಉಪಾಧ್ಯಕ್ಷರಾದ ಶ್ರೀ ಈಶ್ವರ ನಾಯ್ಕ, ಜಿಲ್ಲಾ ಕಾರ್ಯದರ್ಶಿಗಳಾದ ಶ್ರೀ ಶ್ರೀಕಾಂತ್ ನಾಯ್ಕ ಹಾಗೂ ಶ್ರೀ ಸುಬ್ರಾಯ ದೇವಾಡಿಗ, ಮಂಡಲ ಹಿಂದುಳಿದ ಮೋರ್ಚಾ ಅಧ್ಯಕ್ಷರಾದ ಶ್ರೀ ಉಮೇಶ್ ನಾಯ್ಕ, ಯುವ ಮೋರ್ಚಾ ಅಧ್ಯಕ್ಷರಾದ ಶ್ರೀ ಸುನೀಲ್ ಕಾಮತ್, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಶ್ರೀನಿವಾಸ ನಾಯ್ಕ, ಶ್ರೀ ಶ್ರೀಧರ ನಾಯ್ಕ, ಪಕ್ಷದ ಪ್ರಮುಖರಾದ ಶ್ರೀ ರವಿ ನಾಯ್ಕ ಜಾಲಿ, ಶ್ರೀ ಸುರೇಶ ನಾಯ್ಕ, ಶ್ರೀ ಮೋಹನ್ ನಾಯ್ಕ, ಶ್ರೀ ಗಣಪತಿ ದೇವಾಡಿಗ ಮೊದಲಾದವರು, ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.