ಕಾರವಾರ: ತಾಲ್ಲೂಕಿನ ಕಡವಾಡ ವೈಲ ಮಕೇರಿ ರಸ್ತೆ ಬದಿಯಲ್ಲಿ ಬೃಹತ್ ಮುಳ್ಳಿನ ಗಿಡಗಂಟಿಗಳು ಬೆಳೆದು ಕೊಂಡಿದ್ದು ವಾಹನ ಸವಾರರು ಈ ರಸ್ತೆಯಲ್ಲಿ ಸಂಚರಿಸುವಾಗ ದಿನ ನಿತ್ಯ ತೊಂದರೆ ಅನುಭವಿಸುತ್ತಿದ್ದಾರೆ.ಆದ್ದರಿಂದ ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳು ಕೂಡಲೇ ತೆರವು ಮಾಡಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಕಾರವಾರ ನಗರ ಘಟಕ ಅಧ್ಯಕ್ಷ ರಾಜಾ ನಾಯ್ಕ ಅವರು ಆಗ್ರಹಿಸಿದ್ದಾರೆ.ಕಡವಾಡ ಹಾಗೂ ಶಿರವಾಡ ಗ್ರಾಮ ಪಂಚಾಯತ ವ್ಯಾಪ್ತಿಯ ಮಕೇರಿ ಸುಲ್ತಾನಪುರ ಗಡಿಭಾಗದಲ್ಲಿ ನೂತನ ಸೇತುವೆಯ ಸಮೀಪದಿಂದ ರಸ್ತೆ ಬದಿಯುದ್ದಕೂ ಬೃಹತ್ ಮುಳ್ಳಿನ ಗಿಡಗಂಟಿಗಳು ಬೆಳೆದು ಕೊಂಡಿದ್ದರಿಂದ ವಾಹನ ಸವಾರರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಇಲ್ಲಿನ ಮುಳ್ಳಿನ ಗಿಡಗಂಟಿಗಳು ಬೆಳೆದುಕೊಂಡು ರಸ್ತೆವರೆಗೂ ಆವರಿಸಿವೆ. ವಾಹನ ಸವಾರರ ಮೈ ಕೈ ಕಣ್ಣಿಗೆ ಬಡಿಯುತ್ತಿವೆ. ಮತ್ತು ಹಗಲು ರಾತ್ರಿ ಸಾಕಷ್ಟು ಸಂಖ್ಯೆಯಲ್ಲಿ ವಾಹನ ಸವಾರರು ಓಡಾಡುತ್ತಿದ್ದಾರೆ.ಮತ್ತು ರಾತ್ರಿ ವೇಳೆಯಲ್ಲಿ ವಾಹನ ಸವಾರರು ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ.ಆದ್ದರಿಂದಕೂಡಲೇ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಕ್ರಮ ಕೈಗೊಂಡು ಸುಗಮ ಸಂಚಾರಕ್ಕೆ ಅನುವು ಮಾಡಿ ಕೊಡಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಕಾರವಾರ ನಗರ ಘಟಕ ಅಧ್ಯಕ್ಷ ರಾಜಾ ನಾಯ್ಕ ಅವರು ಆಗ್ರಹಿಸಿದ್ದಾರೆ.