ಶಿರಸಿ: ರಾಜ್ಯ ಸರ್ಕಾರವು ಕಸ್ತೂರಿರಂಗನ್ ವರದಿ ಸಂಪೂರ್ಣವಾಗಿ ತಿರಸ್ಕರಿಸಲು ತೀರ್ಮಾನಿಸುವ ಹಿನ್ನಲೆಯಲ್ಲಿ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಗ್ರೀನ್ ಕಾರ್ಡ ಹೊಂದಿರುವ ಪ್ರಮುಖರ ತುರ್ತು ಸಭೆ ಅ.೧ ಮಂಗಳವಾರ ಮುಂಜಾನೆ ೧೦ ಗಂಟೆಗೆ ಹೋರಾಟಗಾರರ ವೇದಿಕೆಯ ಕಾರ್ಯಾಲಯದಲ್ಲಿ ಕರೆಯಲಾಗಿದೆ ಎಂದು ಅಧ್ಯಕ್ಷ ರವೀಂದ್ರ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೇಂದ್ರ ಸರ್ಕಾರವು ಕಸ್ತೂರಿರಂಗನ್ ವರದಿ ಸಂಪೂರ್ಣವಾಗಿ ತಿರಸ್ಕರಿಸುವ ನಿರ್ಣಯ ತೆಗೆದುಕೊಳ್ಳಲು ಹೋರಾಟದ ವೇದಿಕೆ ತೆಗೆದುಕೊಳ್ಳುವ ನಿರ್ಣಯ ಕುರಿತು ಚರ್ಚಿಸಲಾಗುವುದೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.