ಭಟ್ಕಳ-ಭಟ್ಕಳ ಅರ್ಬನ್ ಬ್ಯಾಂಕ್ ಸಭಾಂಗಣದಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ನಡೆದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಯವರ ಜಯಂತಿ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಅವರು ಭಾಗಿಯಾಗಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.ನಂತರ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಕ ವೈದ್ಯ1869 ರಂದು ಗುಜರಾತಿನಲ್ಲಿ ಜನಿಸಿದ ಮಹಾತ್ಮ ಗಾಂಧೀಜಿಯವರು 155 ನೇ ಜನ್ಮ ದಿನವನ್ನು ನಾವು ಇಂದು ಆಚರಿಸುತ್ತಿದ್ದೇವೆ. ಸತ್ಯ, ಅಹಿಂಸೆ ಸಮಾನತೆಯ ಮೂಲಕ ಸ್ವಾತಂತ್ರ್ಯ ಹೋರಾಟ ಕಿಚ್ಚು ಹೊತ್ತಿಸಿದ ಮಹಾತ್ಮ ಗಾಂಧೀಜಿಯವರ ತತ್ವ ಸಿದ್ದಾಂತಗಳು ಇಂದಿಗೂ ಜೀವಂತವಾಗಿದೆ. ಮಹಾತ್ಮ ಗಾಂಧೀಜಿಯವರು ಬೆಳಗಾವಿ ಕಾಂಗ್ರೆಸ್ ಅಧಿವೇಶನ ಅಧ್ಯಕ್ಷತೆ ವಹಿಸಿ ಇಂದಿಗೆ 100 ವರ್ಷಗಳು ಕಳೆದಿದೆ. ದೇಶಕ್ಕೆ ಸ್ವಾತಂತ್ರ್ಯ ಸಿಗುವವರೆಗೂ ಯಾರು ಈ ಹೋರಾಟದಿಂದ ಹಿಂದೆ ಸರಿಯುವಂತಿಲ್ಲ ಎನ್ನುವ ನಿರ್ಣಯವನ್ನ ಈ ಅಧಿವೇಶನದಲ್ಲಿ ಕೈಗೊಳ್ಳಲಾಗಿತ್ತು. ಇಂದಿನ ಯುವ ಜನಾಂಗಕ್ಕೆ ಮಹಾತ್ಮ ಗಾಂಧಿಯವರ ಹೋರಾಟ, ಆದರ್ಶಗಳನ್ನು ತಿಳಿಸುವ ಕೆಲಸ ಆಗಬೇಕಿದ್ದು ಆ ಉದ್ದೇಶದಿಂದ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಿದ್ದೇವೆ ಎಂದರು.
ಲಾಲಾ ಬಹುದ್ದೂರ್ ಶಾಸ್ತ್ರೀಯವರು ದೇಶದ ಎರಡನೇ ಪ್ರಧಾನಿಯಾಗಿ ಆಯ್ಕೆಯಾಗಿದ್ದರು. ತಮ್ಮ ರಾಜಕೀಯ ಜೀವನದಲ್ಲಿ ಅತ್ಯಂತ ಪ್ರಾಮಾಣಿಕ ರಾಜಕಾರಣಿ ಎನ್ನುವ ಹೆಗ್ಗಳಿಕೆಗೆ ಪಡೆದುಕೊಂದಿದ್ದರು.ಜೈ ಜವಾನ್ ಜೈ ಕಿಸಾನ್ ಎನ್ನುವ ಘೋಷಣೆವಾಕ್ಯದೊಂದಿಗೆ ದೇಶದ ರೈತರನ್ನು ಸೈನಿಕರೆಂದು ಉತ್ತೇಜಸಿದರು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ವೇಧಿಕೆಯಲ್ಲಿ ಭಟ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೆಂಕಟೇಶ್ ನಾಯ್ಕ, ಕಾಂಗ್ರೇಸ್ ಮುಖಂಡ ಭಟ್ಕಳ ತಂಜಿಮ್ ಅಧ್ಯಕ್ಷ ಇನಾಯಿತುಲ್ಲ ಶಾಭಂದ್ರಿ, ಜಜಾಲಿ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಇಮ್ರಾನ್ ಲಂಕಾ, ಭಟ್ಕಳ ಪುರಸಭೆ ಉಪಾಧ್ಯಕ್ಷ ರು, ಕಾಂಗ್ರೆಸ್ ಮುಖಂಡ ಟಿ.ಡಿ.ನಾಯ್ಕ್ ಮುಂತಾದ ವರು ಉಪಸ್ಥಿತರಿದ್ದರು.