ಕಾರವಾರ-ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಅವರು ಇಂದು ಕಾರವಾರದಲ್ಲಿ ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿ ಪ್ರಾಧಿಕಾರದ ಮತ್ತು ಲೋಕೋಪಯೋಗಿ ಇಲಾಖೆಅಧಿಕಾರಿಗಳೊಂದಿಗೆ ಸಭೆ ನಡೆಸಿ
ಜಿಲ್ಲೆಯಲ್ಲಿ ರಸ್ತೆಯಲ್ಲಿ ಬಿದ್ದಿರುವ ಗುಂಡಿಗಳು ಹಾಗೂ ರಾಷ್ಟ್ರಿಯ ಹೆದ್ದಾರಿ ಹಾಗೂ ಹೆದ್ದಾರಿಯಲ್ಲಿರುವ ಸೇತುವೆಗಳ ಮೇಲೆ ಬಿದ್ದಿರುವ ಗುಂಡಿಗಳನ್ನು ತಕ್ಷಣ ಮುಚ್ಚುವಂತೆ ಅಧಿಕಾರಿಗಳಿಗೆ ಆದೇಶ ಮಾಡಿದ್ದರು.
ಜಿಲ್ಲೆಯಲ್ಲಿನ ಹಳ್ಳಿಗಳಲ್ಲಿ, ರಾಜ್ಯ ಹೆದ್ದಾರಿಗಳಲ್ಲಿ ಬಿದ್ದಿರುವೆ ರಸ್ತೆಗುಂಡಿಗಳನ್ನು ತಕ್ಷಣವೇ ಸರಿಪಡಿಸುವಂತೆ ಲೋಕೋಪಯೋಗಿ ಇಲಾಖೆ ಹಾಗೂ ರಾಜ್ಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲೆಯಲ್ಲಿ ಇನ್ನು ಆಗಬೇಕಿರುವ ರಸ್ತೆ ಹಾಗೂ ಕಿರು ಸೇತುವೆಗಳ ಬಗ್ಗೆ ಮಾಹಿತಿ ಪಡೆದು ನಂತರ ರಾಷ್ಟ್ರೀಯ ಹೆದ್ದಾರಿಯಲ್ಲಿ ಉಂಟಾದ ಸಮಸ್ಯೆಗಳು ಮತ್ತು ರಾಷ್ಟ್ರೀಯ ಹೆದ್ದಾರಿಯಲ್ಲಿ ಹಳೇಯ ಸೇತುವೆಗಳ ಬಗ್ಗೆ ಮಾಹಿತಿ ಪಡೆದು ಈಗಾಲೆ ವಾಹನ ಸಂಚಾರ ಬಂದ್ ಮಾಡಿರುವ ಕೆಲವು ಸೇತುವೆಗಳನ್ನು ತಕ್ಷಣೆವೇ ಪರಿಶೀಲಿಸಿ ಅದನ್ನು ಸರಿ ಪಡಿಸಿ ಸಂಚಾರಕ್ಕೆ ಅನುವು ಮಾಡಿ ಕೊಡುವಂತೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.ಈ ಸಂದರ್ಭದಲ್ಲಿ ಜೆಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೇರಿದಂತೆ , ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.