ಭಟ್ಕಳ- ಭಟ್ಕಳ ತಾಲೂಕು ಕಸಾಪದಿಂದ ರಸಪ್ರಶ್ನೆ ಸ್ಪರ್ಧೆ –
ರಾಜ್ಯೋತ್ಸವ ಮಾಸದ ಅಂಗವಾಗಿ ಕನ್ನಡ ಕಾರ್ತಿಕ ಅನುದಿನ ಅನುಷ್ಪಂದನ ಕಾರ್ಯಕ್ರಮದ ಅಡಿಯಲ್ಲಿ
ಉತ್ತರ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಭಟ್ಕಳ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಬೆದ್ರು ಮನೆ ಮುರುಡೇಶ್ವರ ಇವರ ಸಹಯೋಗದಲ್ಲಿ ವಿದ್ಯಾರ್ಥಿಗಳಿಗೆ ಕನ್ನಡ ನಾಡು ನುಡಿ ರಸಪ್ರಶ್ನೆ ಸ್ಪರ್ಧೆ ನಡೆಯಿತು.
ಸ್ಪರ್ಧೆಯಲ್ಲಿ ಜಾನ್ವಿ ರಾಮ ನಾಯಕ್ ಪ್ರಥಮ ಸ್ಥಾನ ರಚಿತಾ ಭಾಸ್ಕರ್ ನಾಯ್ಕ, ದ್ವಿತೀಯ ಸ್ಥಾನ, ಪ್ರಣಿತ ಚಂದ್ರ ನಾಯ್ಕ ಹಾಗೂ ಸಿಂಚನ ಅಣ್ಣಪ್ಪ ನಾಯ್ಕ ತೃತೀಯ ಸ್ಥಾನವನ್ನು ಪಡೆದರು. ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ರಸಪ್ರಶ್ನೆ ಸ್ಪರ್ಧೆಯನ್ನು ಶಾಲಾ ಮುಖ್ಯಾಧ್ಯಾಪಕಿ ಹಾಗೂ ಕಸಾಪ ಕಾರ್ಯಕಾರಿ ಸಮಿತಿ ಸದಸ್ಯೆ ಪೂರ್ಣಿಮಾ ಕರ್ಕಿಕರ್ ಹಾಗೂ ಶಿಕ್ಷಕ ವೃಂದದವರು ನಿರ್ವಹಿಸಿದರು. ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ, ಪುಸ್ತಕ ಬಹುಮಾನ ಹಾಗೂ ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಹಾಗೂ ಲೇಖನಿಯನ್ನು ಬಹುಮಾನವಾಗಿ ನೀಡಲಾಯಿತು.
ಈ ಸಂದರ್ಭದಲ್ಲಿ ಶಿಕ್ಷಕರಾದ ಉಲ್ಲಾಸ ನಾಯ್ಕ,ಉಮಾದೇವಿ,ನಯನಾ ನಾಯ್ಕ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸ್ಪರ್ಧೆಯಲ್ಲಿ ಪಾಲ್ಗೊಂಡ ಹಾಗೂ ವಿಜೇತ ವಿದ್ಯಾರ್ಥಿಗಳಿಗೆ ಕಸಾಪ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ ಅಭಿನಂದಿಸಿದ್ದಾರಲ್ಲದೇ ವಿದ್ಯಾರ್ಥಿಗಳಲ್ಲಿ ನಾಡು ನುಡಿಯ ಕುರಿತು ಅಭಿಮಾನ ಅರಿವು ಮೂಡಿಸುವಂಥ ಕಾರ್ಯಕ್ರಮ ಸಂಘಟಿಸಲು ಸಹಕರಿಸಿದ ಸ.ಕಿ.ಪ್ರಾಥಮಿಕ ಶಾಲೆ ಬೆದ್ರಮನೆ ಮುರ್ಡೇಶ್ವರದ ಮುಖ್ಯಾಧ್ಯಾಪಕರು ಹಾಗೂ ಶಿಕ್ಷಕವೃಂದಕ್ಕೆ ಕೃತಜ್ಞತೆಯನ್ನು ಸಲ್ಲಿಸಿದ್ದಾರೆ.