ಶಿರಸಿ: ಅರಣ್ಯವಾಸಿಗಳ ಸಮಸ್ಯೆಗಳನ್ನ ಸರ್ಕಾರಕ್ಕೆ ಸ್ಪಂಧಿಸುವ ದಿಶೆಯಲ್ಲಿ ಬೆಂಗಳೂರು ಚಲೋ ಕಾರ್ಯಕ್ರಮ ಹಮ್ಮಿಕೊಂಡಿದ್ದು ಇರುತ್ತದೆ. ಈ ಕಾರ್ಯಕ್ರಮದಲ್ಲಿ ಅರಣ್ಯವಾಸಿಗಳ ಸಮಸ್ಯೆಗಳನ್ನ ಅನಾವರಣಕ್ಕೆ ನೀರ್ಧಾರಗೊಳಿಸಲಾಗಿದೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದರು.
ಅವರು ಇಂದು ಹೋರಾಟಗಾರರ ವೇದಿಕೆಯ ಕಾರ್ಯಾಲಯುದಲ್ಲಿ ಬೆಂಗಳೂರು ಚಲೋ ಕಾರ್ಯಕ್ರಮದ ಜಿಲ್ಲಾಮಟ್ಟದ ಪದಾಧಿಕಾರಿಗಳನ್ನುದ್ದೇಶಿಸಿ ಮಾತನಾಡುತ್ತ ಮೇಲಿನಂತೆ ಹೇಳಿದರು.
ಹೋರಾಟಗಾರರ ವೇದಿಕೆಯು ಸಾಂಘಿಕ ಮತ್ತು ಕಾನೂನಾತ್ಮಕ ಹೋರಾಟದ ಮೂಲಕ ಕಳೆದ ೩೩ ವರ್ಷದಿಂದ ಜನಾದೋಲನ ರೀತಿಯಲ್ಲಿ ಸಂಘಟಿಸಲಾಗಿದ್ದು, ಬೆಂಗಳೂರು ಚಲೋ ಸರ್ಕಾರದ ಮೇಲೆ ಹೆಚ್ಚಿನ ಒತ್ತಡ ಹೇರಲಾಗುವುದೆಂದು ಅವರು ಹೇಳಿದರು.
ಸಭೆಯಲ್ಲಿ ಎಮ್.ಆರ್. ನಾಯ್ಕ, ಆರ್.ಎಚ್. ನಾಯ್ಕ ಜನಕಡಗಲ್, ರಾಜು ನರೇಬೈÀಲ್, ದೇವರಾಜ ಗೊಂಡ ಚಂದ್ರು ನಾಯ್ಕ, ಹರಿಹರ ನಾಯ್ಕ, ಅಣ್ಣಪ್ಪ ನಾಯ್ಕ, ದಿವಾಕರ ಮರಾಠಿ, ಮುಂತಾದವರು ಉಪಸ್ಥಿತರಿದ್ದರು.
ಯಶಸ್ವಿಗೆ ಕರೆ:
ಬೃಹತ್ ಬೆಂಗಳೂರು ಚಲೋ ಕಾರ್ಯಕ್ರಮಕ್ಕೆ ಜಿಲ್ಲಾದ್ಯಂತ ಉತ್ತಮ ಪಕ್ರಿಯೆ ಇದ್ದು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಲು ಜಿಲ್ಲಾಧ್ಯಕ್ಷ ರವೀಂದ್ರ ನಾಯ್ಕ ಕರೆ ನೀಡಿದರು.