ಅಂಕೋಲಾ: ಬೋಳೆಯ ಜಮಗೋಡ ಬಳಿ ಕಾರು ಪಲ್ಟಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸಾವನಪ್ಪಿದ್ದಾರೆ.
ಮುಂಬೈ ಅಂದೇರಿಯ ನಾಗೇಂದ್ರ ಸದಾಶಿವ ಭಟ್ಕಳ (72) ಹಾಗೂ ಅವರ ಪತ್ನಿ ಸುಧಾ ನಾಗೇಂದ್ರ ಭಟ್ಕಳ (65) ಸಾವನಪ್ಪಿದವರು. ಒಟ್ಟು ಕಾರಿನಲ್ಲಿ ಐದು ಜನ ಪ್ರಯಾಣಿಸುತ್ತಿದ್ದರು.
ನಮಿತಾ ನಿತ್ಯಾನಂದ ನಾಯಕ (56), ದೀಪ್ತಿ ವಿಶ್ವಾಸ ಪ್ರಭು (36) ಹಾಗೂ ಮಂಗಳೂರಿನ ನಿತ್ಯಾನಂದ ವಾಮನ ನಾಯಕ ಈ ಅಪಘಾತದಲ್ಲಿ ಗಾಯಗೊಂಡಿದ್ದಾರೆ. ದೀಪ್ತಿ ವಿಶ್ವಾಸ ಪ್ರಭು ಅವರಿಗೆ ಗಂಭೀರ ಪ್ರಮಾಣದ ಗಾಯವಾಗಿದ್ದು, ಅವರನ್ನು ಕಿಮ್ಸ್’ಗೆ ದಾಖಲಿಸಲಾಗಿದೆ.