ಭಟ್ಕಳದ ತಾಲೂಕು ಆಡಳಿತ ಸೌಧದಲ್ಲಿ ಭೂ ಸುರಕ್ಷಾ ಯೋಜನೆಯ ಅಡಿಯಲ್ಲಿ ಹೊಸದಾಗಿ ಆರಂಭಿಸಿದ ಇ-ಖಜಾನೆ (ಡಿಜಿಟಲ್ ಭೂ ದಾಖಲೆ ಸಂಗ್ರಹ ಕೇಂದ್ರ) ಉದ್ಘಾಟಿಸಿ ದ ಸಚಿವ ಮಂಕಾಳ ವೈದ್ಯ
ಭಟ್ಕಳ- ಭಟ್ಕಳದಲ್ಲಿ ತಾಲೂಕು ಆಡಳಿತ ಸೌಧದಲ್ಲಿ ಭೂ ಸುರಕ್ಷಾ ಯೋಜನೆಯ ಅಡಿಯಲ್ಲಿ ಹೊಸದಾಗಿ ಆರಂಭಿಸಿದ ಇ-ಖಜಾನೆ (ಡಿಜಿಟಲ್ ಭೂ ದಾಖಲೆ ಸಂಗ್ರಹ ಕೇಂದ್ರ) ಯನ್ನು ಮೀನುಗಾರಿಕೆ ಸಚಿವ ಮಂಕಾಳ ಎಸ್ ವೈದ್ಯ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು ಹಳೆಯ, ದುಸ್ಥಿತಿಯಲ್ಲಿರುವ ಭೂ ದಾಖಲೆಗಳನ್ನು ಶಾಶ್ವತ ಡಿಜಿ ದಾಖಲೆಗಳಾಗಿ ಪರಿವರ್ತಿಸುವುದು, ರೆಕಾರ್ಡ್ ರೂಂಗಳಿಂದ ದಾಖಲೆ ಪಡೆದುಕೊಳ್ಳಲು ಇರುವ ತೊಂದರೆಗಳ ನಿವಾರಣೆ, ಹಳೆಯ ದಾಖಲೆಗಳ ಸಂರಕ್ಷಣೆ ಹಾಗೂ ಕಳವು- ತಿದ್ದುಪಡಿ ನಿಯಂತ್ರಣ ಮಾಡುವುದು ಸೇರಿದಂತೆ ಹಲವು ಪ್ರಯೋಜನಗಳನ್ನು ಇನ್ನು ಮುಂದೆ ಸಾರ್ವಜನಿಕರು ಪಡೆಯಬಹುದು ಎಂದರು. ತಾಲ್ಲೂಕು ಕಚೇರಿ, ಸರ್ವೆ ಮತ್ತು ನೋಂದಣಿ ಇಲಾಖೆಗಳ ಎಲ್ಲ ಭೂ ದಾಖಲೆಗಳ ಡಿಜಟಲೀಕರಣ ಮಾಡುವ ಉದ್ದೇಶದಿಂದ ನಮ್ಮ ಸರ್ಕಾರ ಈ ಕಾರ್ಯಕ್ರಮ ಆರಂಭಿಸಿದೆ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಭಟ್ಕಳ ಡಿ.ಎಸ್.ಪಿ ಮಹೇಶ್, ತಹಶೀಲ್ದಾರ್ ನಾಗೇಶ್ , ಭಟ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೆಂಕಟೇಶ್ ನಾಯ್ಕ್, ಜಾಲಿ ಪಟ್ಟಣ ಪಂಚಾಯಿತ ಸದಸ್ಯ ರಮೇಶ್ ನಾಯ್ಕ್ ಮುಂತಾದವರು ಉಪಸ್ಥಿತರಿದ್ದರು.