ಭಟ್ಕಳ: ಮುರುಡೇಶ್ವರದ ದೇವಸ್ಥಾನದ ಮಹಾರಥೋತ್ಸವ ಜನವರಿ 19ರಂದು ನಡೆಯಲಿದೆ.ಲಕ್ಷಾಂತರ ಭಕ್ತರ ಆಗಮನ ನಿರೀಕ್ಷೆಯಿದ್ದು, ಅಹಿತಕರ ಘಟನೆ ನಡೆಯದಂತೆ ಜಿಲ್ಲಾಡಳಿತ ಎಚ್ಚರಿಕೆವಹಿಸಿದೆ. ಈ ಹಿನ್ನೆಲೆ ಆ ದಿನ ಮದ್ಯ ಮಾರಾಟವನ್ನು ಸಹ ನಿಷೇಧಿಸಲಾಗಿದೆ.
ಜನವರಿ 19ರ ಬೆಳಗ್ಗೆ 6 ಗಂಟೆಯಿoದ ಮರುದಿನ ಬೆಳಗ್ಗೆ 6 ಗಂಟೆಯವರೆಗೆ ಎಲ್ಲಾ ಮದ್ಯದ ಮಳಿಗೆಯನ್ನು ಮುಚ್ಚುವಂತೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ನಿಗಾವಹಿಸುವಂತೆ ಅವರು ಅಧೀನ ಅಧಿಕಾರಿಗಳಿಗೆ ಸೂಚಿಸಿದ್ದಾರೆ.ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವುದಕ್ಕಾಗಿ ಎಲ್ಲಾ ಬಗೆಯ ಕಟ್ಟುನಿಟ್ಟಿನ ಕ್ರಮ ಜರುಗಿಸುವಂತೆ ಅವರು ಸೂಚಿಸಿದ್ದಾರೆ.