ಭಟ್ಕಳ-ಭಟ್ಕಳ ತಾಲೂಕಿನ ಜಾಲಿ ಪಟ್ಟಣ ಪಂಚಾಯತ್ ನೂತನ ಕಟ್ಟಡದ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಮಂಗಳವಾರ ನೆರವೇರಿಸಿದರು.
ನಂತರ ಮಾತನಾಡಿದ ಸಚಿವ ಮಂಕಾಳ ವೈದ್ಯರು ಈ ಹಿಂದೆ ನಾನು ಶಾಸಕನಾಗಿದ್ದಾಗ ಅವಧಿಯಲ್ಲಿ ಸರಕಾರದಿಂದ ₹1 ಕೋಟಿ ರೂಪಾಯಿ ಅನುಧಾನವನ್ನು ಜಾಲಿ ಪಟ್ಟಣ ಪಂಚಾಯಿತಿ ನೂತನ ಕಟ್ಟಡಕ್ಕೆ ಮಂಜೂರು ಮಾಡಿಸಿಕೊಂಡು ಬಂದು ದಿನಾಂಕ 06-12-2017 ರಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರ ಅಮೃತ ಹಸ್ತದಿಂದ ಅಂದು ಶಂಕು ಸ್ಥಾಪನೆ ನೆರವೇರಿಸಲಾಗಿತ್ತು.ದುರಾದೃಷ್ಟ ಎನ್ನುವಂತೆ 5 ವರ್ಷ ಆಡಳಿತ ನಡೆಸಿದ ಬಿಜೆಪಿ ಸರಕಾರ ಹಾಗೂ ಬಿಜೆಪಿ ಶಾಸಕರು ಈ ಒಂದು ಕಟ್ಟಡವನ್ನು ಪೂರ್ಣಗೊಳಿಸದೆ ಇರುವುದು ನಿಜಕ್ಕೂ ಬೇಸರದ ಸಂಗತಿ ಎಂದರು. ಆದರೆ ಇಂದು ಮತ್ತೆ ಅಧಿಕಾರಕ್ಕೆ ಬಂದ ನಮ್ಮ ಕಾಂಗ್ರೆಸ್ ಸರಕಾರ ಹಾಗೂ ನಾನು ಕೂಡಲೇ ಇದರ ಬಗ್ಗೆ ಗಮನ ಹರಿಸಿ ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಶೀಘ್ರವಾಗಿ ಕಟ್ಟಡವನ್ನು ಪೂರ್ಣಗೊಳಿಸುವಂತೆ ಸೂಚಿಸಲಾಗಿತ್ತು. ಅದರಂತೆ ಇಂದು ಕಟ್ಟಡವು ಪೂರ್ಣಗೊಂಡು ಉದ್ಘಾಟಿಸಿ ಸಾರ್ವಜನಿಕರ ಅನುಕೂಲಕ್ಕೆ ಅನುವು ಮಾಡಿಕೊಡಲಾಗಿದೆ ಎಂದು ತಿಳಿಸಿದರು.
ಇದೆ ಸಂದರ್ಭದಲ್ಲಿ ಜಾಲಿ ಪಟ್ಟಣ ಪಂಚಾಯಿತಿ ವತಿಯಿಂದ ಸಚಿವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಜಾಲಿ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಇಮ್ರಾನ್ , ಜಾಲಿ ಪಟ್ಟಣ ಪಂಚಾಯಿತಿ ಸದಸ್ಯ ರಮೇಶ್ ನಾಯ್ಕ್ , ಜಾಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷರು, ಸದಸ್ಯರು ಸೇರಿದಂತೆ ಅಧಿಕಾರಿಗಳು, ಕಾಂಗ್ರೆಸ್ ಪಕ್ಷದ ಮುಖಂಡರು ,ಕಾರ್ಯಕರ್ತರು ಉಪಸ್ಥಿತರಿದ್ದರು.