ಭಟ್ಕಳ : ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದ ಜಿಲ್ಲೆ ಗಳಲ್ಲಿ ಪ್ರಾಕೃತಿಕ ವಿಕೋಪ ತಡೆ ಕಾಮಗಾರಿಗಳಿಗಾಗಿ 500 ಕೋಟಿ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಕಡಲಕೊರೆತ ತಡೆಗೆ 100 ಕೋಟಿರೂ. ಬಿಡುಗಡೆ ಮಾಡುವುದಾಗಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದರು.
ಮಂಗಳವಾರ ಬೆಳಿಗ್ಗೆ ಅವರು ಶಿರಸಿ ಕುಮಟಾ ಮಧ್ಯದ ಹೆದ್ದಾರಿಯಲ್ಲಿ ಬರುವ ದೇವಿಮನೆ ಘಟ್ಟದಲ್ಲಿ ಧರೆ ಕುಸಿತದ ಪ್ರದೇಶ ವೀಕ್ಷಿಸಿದ ಅವರು, ಕುಮಟಾ ತಹಶಿಲ್ದಾರರ ಕಚೇರಿಯ ರೆಕಾರ್ಡ್ ಕೋಣೆಗೆ ಭೇಟಿ ನೀಡಿದ ನಂತರ, ಮಾಧ್ಯಮಗಳ ಜೊತೆಗೆ ಮಾತನಾಡಿದರು.
ಕಳೆದ ವರ್ಷ ಮಳೆಗಾಲದಲ್ಲಿ ಜಿಲ್ಲೆಯಲ್ಲಿ ಅಪಾರ ಸಾವು ನೋವಿಗೆ ಕಾರಣವಾಗಿದ್ದ ಅಂಕೋಲಾ ತಾಲೂಕಿನ ಶಿರೂರು ಗುಡ್ಡ ಕುಸಿತ ಸ್ಥಳಕ್ಕೆ ಇಂದು ಕಂದಾಯ ಸಚಿವರಾದ ಶ್ರೀ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಭೇಟಿ ನೀಡಿ ಅಭಿವೃದ್ಧಿ ಕಾಮಗಾರಿಯನ್ನು ಪರಿಶೀಲಿಸಿದರು. ಈ ವೇಳೆ ಸೂಕ್ತ ಸಮಯಕ್ಕೆ ಕಾಮಗಾರಿ ಮುಗಿಸದೆ ವಿಳಂಬ ಮಾಡುತ್ತಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಯನ್ನೂ ಸ್ಥಳಕ್ಕೆ ಕರೆಸಿ ಕಾಮಗಾರಿ ಶೀಘ್ರ ಮುಗಿಸುವಂತೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ , ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ , ಶಾಸಕರಾದ ಭೀಮಣ್ಣ ನಾಯ್ಕ, ಸತೀಶ ಸೈಲ್, ದಿನಕರ ಶೆಟ್ಟಿ, ಮುಂತಾದವರು ಉಪಸ್ಥಿತರಿದ್ದರು.