ಕುಮಟಾ-ಉತ್ತರ ಕನ್ನಡ ಜಿಲ್ಲೆಯ ಕುಮಟಾ ವಿಧಾನಸಭಾ ಕ್ಷೇತ್ರದಲ್ಲಿ ಇಂದು ಹಮ್ಮಿಕೊಂಡಿದ್ದ ಜನರೊಂದಿಗೆ ಜನತಾದಳ-ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನದ ಕಾರ್ಯಕ್ರಮವನ್ನು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಉದ್ಘಾಟಿಸಿದರು .
ನಂತರ ಸಭೆಯನ್ನು ಉದ್ದೇಶಿಸಿ ಮಾತನಾಡಿ ಜೆಡಿಎಸ್ ಪಕ್ಷವನ್ನು ಕುಮಟಾ- ಹೊನ್ನಾವರ ಮತಕ್ಷೇತ್ರದಲ್ಲಿ ಬಲಿಷ್ಠವಾಗಿ ಸಂಘಟಿಸುವ ನಿಟ್ಟಿನಲ್ಲಿ ಬೂತ್ ಮಟ್ಟದಲ್ಲಿ 9964002028 ಸಂಖ್ಯೆಗೆ ಮಿಸ್ಡ್ ಕಾಲ್ ಕೊಡಿಸುವ ಮೂಲಕ ಸದಸ್ಯತ್ವ ನೋಂದಣಿಯನ್ನು ಯಶಸ್ವಿಗೊಳಿಸಲು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಲ್ಲಿ ಮನವಿ ಮಾಡಿದರು.
ಗ್ಯಾರಂಟಿ ಸರ್ಕಾರದ ಆಡಳಿತ ವೈಫಲ್ಯ, ಮೀನುಗಾರರ ಬಗೆಗಿನ ಸರ್ಕಾರದ ನಿರ್ಲಕ್ಷ್ಯ, ಮೀನುಗಾರರ ಸಮಸ್ಯೆಗಳು , ಉತ್ತರ ಕನ್ನಡ ಜಿಲ್ಲೆಯ ಜನರ ಬಹುದಿನಗಳ ಬೇಡಿಕೆಯಾದ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ಸೇರಿದಂತೆ ವಿವಿಧ ಸ್ಥಳೀಯ ಸಮಸ್ಯೆಗಳ ಕುರಿತು ಕಾರ್ಯಕರ್ತರಿಗೆ ತಿಳಿಸಿ, ಮುಂಬರುವ ದಿನಗಳಲ್ಲಿ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷವನ್ನು ಸುಭದ್ರವಾಗಿ ಕಟ್ಟಲು ನಾವೆಲ್ಲರೂ ಹಗಲಿರುಳು ಶ್ರಮಿಸೋಣ ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಶ್ರೀ ಆನಂದ್ ಅಸ್ನೋಟಿಕರ್, ಕೋರ್ ಕಮಿಟಿ ಸದಸ್ಯರಾದ ಶ್ರೀ ಸೂರಜ್ ನಾಯ್ಕ್ ಸೋನಿ, ಮಾಜಿ ಶಾಸಕರಾದ ಶ್ರೀ ವೀರಭದ್ರಪ್ಪ ಹಾಲಹರವಿ, ವಿವಿಧ ಜಿಲ್ಲೆಗಳ ಜಿಲ್ಲಾಧ್ಯಕ್ಷರಾದ ಶ್ರೀ ಬಾಲರಾಜ್ ಗುತ್ತೇದಾರ್, ಶ್ರೀ ಉದಯ್ ಶೆಟ್ಟಿ, ಶ್ರೀ ಗುರುರಾಜ್ ಹುಣಸಿಮರದ, ಮಹಿಳಾ ರಾಜ್ಯಾಧ್ಯಕ್ಷರಾದ ಶ್ರೀಮತಿ ರಶ್ಮಿ ರಾಮೇಗೌಡ, ವಕ್ತಾರರಾದ ಶ್ರೀಮತಿ ಪೂರ್ಣಿಮಾ, ಶ್ರೀ ರೋಷನ್ ಬಾಬಾಜಿ, ಮಹಿಳಾ ಜಿಲ್ಲಾಧ್ಯಕ್ಷರಾದ ಶ್ರೀಮತಿ ಮೋಹಿನಿ ನಾಯ್ಕ್, ಮುಖಂಡರಾದ ಶ್ರೀ ಉಪೇಂದ್ರ ಪೈ, ಶ್ರೀ ಸಿ.ಜಿ. ಹೆಗಡೆ, ಶ್ರೀ ಡಿ.ಟಿ. ನಾಯ್ಕ್, ಶ್ರೀ ಜಿ.ಕೆ. ಪಟಗಾರ, ಶ್ರೀ ಯೋಗಿಶ್ ನಾಯ್ಕ್, ಶ್ರೀ ರತ್ನಾಕರ್, ಶ್ರೀ ಎನ್.ಎಸ್. ಹೆಗಡೆ , ಶ್ರೀಮತಿ ವೀಣಾ ನಾಯ್ಕ್ ಸೇರಿದಂತೆ ಸ್ಥಳೀಯ ಮುಖಂಡರು, ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತ ಬಂಧುಗಳು ಉಪಸ್ಥಿತರಿದ್ದರು.