ಭಟ್ಕಳ: ಭಟ್ಕಳ ತಾಲೂಕಿನಲ್ಲಿ ಮತ್ತೆ ಅಕ್ರಮ ಜಾನುವಾರು ಸಾಗಾಟ ಪತ್ತೆಯಾಗಿದ್ದು, ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸ ಇನ್ಸ್ಪೆಕ್ಟರ್ ಮಂಜುನಾಥ್ ಲಿಂಗರೆಡ್ಡಿ ನೇತೃತ್ವದ ಪೊಲೀಸ್ ತಂಡ ಶುಕ್ರವಾರ ಬೆಳಗಿನ ಜಾವ ಭರ್ಜರಿ ದಾಳಿ ನಡೆಸಿ ಲಕ್ಷಾಂತರ ಮೌಲ್ಯದ ಜಾನುವಾರುಗಳನ್ನು ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದೆ.
ಕೇರಳದಿಂದ ಭಟ್ಕಳ ಹನೀಫಾಬಾದ್ ಕಡೆಗೆ ಸಾಗಿಸುತ್ತಿದ್ದ ಅಶೋಕ್ ಲೈಲೆಂಡ್ ಕಂಟೇನರನ್ನು ಪೊಲೀಸರು ಹನೀಫಾಬಾದ್ ಪಿ.ಬಿ. ಇಬ್ರಾಹಿಂ ಪೆಟ್ರೋಲ್ ಬಂಕ್ ಹತ್ತಿರ ತಡೆದು ವಶಕ್ಕೆ ಪಡೆದಿದ್ದಾರೆ. ಯಾವುದೇ ಪರವಾನಿಗೆ ಇಲ್ಲದೇ, ನೀರು ಹುಲ್ಲು ಕೊಡದೇ, ಹಿಂಸಾತ್ಮಕವಾಗಿ ಕಟ್ಟಿಹಾಕಿ ಕಸಾಯಿಖಾನೆಗೆ ಸಾಗಿಸಲಾಗುತ್ತಿದ್ದ ಜಾನುವಾರುಗಳನ್ನು ಪೊಲೀಸರು ರಕ್ಷಿಸಿದ್ದಾರೆ. ಈ ಕಾರ್ಯಾಚರಣೆಯು ಭಟ್ಕಳ ಗ್ರಾಮೀಣ ಠಾಣೆ ಪೋಲೀಸ್ ಇನ್ಸ್ಪೆಕ್ಟರ್ ಮಂಜುನಾಥ ಲಿಂಗಾರೆಡ್ಡಿ ನೇತೃತ್ವದ ತಂಡ ನಡೆಸಿದ್ದು ಮದಿನಾ ಕಾಲನಿಯ ಅಬುಬಕ್ಕರ್ ಗಂಗಾವಳಿ, ಕೇರಳದ ಕಾಸರಗೋಡಿನ ಹಮೀದ, ಉತ್ತರ ಪ್ರದೇಶದ ಆಸಿಪ್, ಹೈದರಾಬಾದನ ಶಾಹುಲ್ ಹಮೀದ ಕೆ. ರನ್ನು ಅರೆಸ್ಟ್ ಮಾಡಿದ್ದಾರೆ. ಭಟ್ಕಳದ ಗ್ರಾಮೀಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.